ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ: ಎಸ್‌ಐಟಿ ಖಡಕ್ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:  

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡದಂತೆ ಎಸ್‌ಐಟಿ ಖಡಕ್ ಸೂಚನೆ ನೀಡಿದ್ದು, ಜೊತೆಗೆ ಅಶ್ಲೀಲ ವೀಡಿಯೋಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದು ಅಪರಾಧ ಎಂದು ಹೇಳಿದೆ.

ಈ ಕುರಿತು ಸಿಐಟಿಯ ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮಾಹಿತಿ ಮತ್ತು ತಂತ್ರಜ್ಞಾನ ಅಧಿನಿಯಮದಲ್ಲಿ ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ, ಪ್ರಸಾರ ಮಾಡುವ ವ್ಯಕ್ತಿಗಳನ್ನು ಸಂದೇಶದ ರಚನಾಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಆದ್ದರಿಂದ ಯಾರಾದರೂ ತಮ್ಮ ಬಳಿ ಅಶ್ಲೀಲ ವಿಡಿಯೋ, ಚಿತ್ರಗಳು ಹಾಗೂ ಧ್ವನಿ ಮುದ್ರಣಗಳನ್ನು ಇಟ್ಟುಕೊಂಡಿದ್ದರೂ ಅದು ಅಪರಾಧವಾಗುತ್ತದೆ. ಕಾರಣ ಜನರು ಯಾವುದೇ ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಡಿಯೋ ಹಾಗೂ ಚಿತ್ರಗಳನ್ನು ಇಟ್ಟುಕೊಳ್ಳುವುದನ್ನು ಅಥವಾ ಪ್ರಸಾರ ಮಾಡುವುದನ್ನು ನಿರ್ಬಂಧಿಸಿಕೊಳ್ಳುವುದು ಸೂಕ್ತ ಎಂದಿದ್ದಾರೆ.

ಒಂದು ವೇಳೆ ಅಂಥಹ ವಿಡಿಯೋ, ಚಿತ್ರಗಳು ಮತ್ತು ಧ್ವನಿ ಮುದ್ರಣಗಳನ್ನು ತಮ್ಮ ಮೊಬೈಲ್ ಅಥವಾ ಇತರೆ ಸಾಧನಗಳಲ್ಲಿ ಹೊಂದಿದ್ದರೆ ‘ಡಿಲೀಟ್’ ಮಾಡುವುದರಿಂದ ಕಾನೂನಿನ ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!