June 27, 2026
Saturday, June 27, 2026
spot_img

ಅಬಕಾರಿ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಖುಲಾಸೆ: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಸೇರಿ 23 ಜನರನ್ನು ಖುಲಾಸೆಗೊಳಿಸಲಾಗಿದೆ.

ಇದೀಗ ಈ ಕೆಳ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಕೇಂದ್ರ ತನಿಖಾ ದಳ (ಸಿಬಿಐ) ದೆಹಲಿ ಹೈಕೋರ್ಟ್‌ನಲ್ಲಿ ತುರ್ತು ಮೇಲ್ಮನವಿ ಸಲ್ಲಿಸಿದೆ. ಕೇಜ್ರಿವಾಲ್ (Arvind ಅವರ ಖುಲಾಸೆಯನ್ನು ರದ್ದುಗೊಳಿಸಲು ಮನವಿ ಮಾಡಿದೆ.

ದೆಹಲಿ ರೌಸ್ ಅವೆನ್ಯೂ ನ್ಯಾಯಾಲಯವು ಪ್ರಮುಖ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಆಮ್ ಆದ್ಮಿ ಪಕ್ಷ (ಎಎಪಿ) ಈ ತೀರ್ಪನ್ನು ಸತ್ಯದ ಐತಿಹಾಸಿಕ ವಿಜಯವೆಂದು ಬಣ್ಣಿಸಿತ್ತು, ಆದರೆ, ಇದೀಗ ಸಿಬಿಐ ದೆಹಲಿ ಹೈಕೋರ್ಟ್​ ಮೊರೆಹೋಗಿದೆ. ಆರೋಪಿಗಳು ಫೋನ್‌ಗಳು ಮತ್ತು ಸಿಮ್‌ಗಳನ್ನು ನಾಶಪಡಿಸಿದ್ದಾರೆ ಎಂಬ ಆರೋಪವನ್ನೂ ಸಿಬಿಐ ಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !