June 24, 2026
Wednesday, June 24, 2026
spot_img

ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಗೆ ಖುಲಾಸೆ: ನ್ಯಾಯಾಲಯದ ತೀರ್ಪಿಗೆ ಗೌರವ ಕೊಡಿ ಎಂದ ಅಣ್ಣಾ ಹಜಾರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿ ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾ ಸೇರಿ 23 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದ ಬಳಿಕ, ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಕೇಜ್ರಿವಾಲ್ ಅವರ ರಾಜಕೀಯ ಮಾರ್ಗದರ್ಶಕರಾಗಿ ಪರಿಗಣಿಸಲ್ಪಡುವ ಹಜಾರೆ, ನ್ಯಾಯಾಂಗ ವ್ಯವಸ್ಥೆಯ ಮೇಲಿನ ನಂಬಿಕೆ ಕಾಪಾಡಿಕೊಳ್ಳುವಂತೆ ದೇಶದ ಜನತೆಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ:

“ದೇಶವು ಕಾನೂನು ಮತ್ತು ನ್ಯಾಯದ ಆಧಾರದ ಮೇಲೆ ನಡೆಯುತ್ತದೆ. ಅಂತಿಮ ತೀರ್ಪು ನ್ಯಾಯಾಲಯದ್ದೇ ಆಗಿದ್ದು, ಪ್ರತಿಯೊಬ್ಬರೂ ಅದನ್ನು ಗೌರವಿಸಬೇಕು,” ಎಂದು ಅವರು ತಿಳಿಸಿದ್ದಾರೆ. ಬಂಧನವಾಗಿದ್ದಾಗಲೂ ಹಾಗೂ ಈಗ ಖುಲಾಸೆಯಾಗಿದ್ದರೂ ನ್ಯಾಯಾಲಯದ ನಿರ್ಧಾರವೇ ಶ್ರೇಷ್ಠವೆಂದು ಅವರು ಪುನರುಚ್ಚರಿಸಿದರು.

ಬಿಡುಗಡೆಯಾದ ಬಳಿಕ ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆರೋಪ ಮಾಡಿರುವ ಕುರಿತು ಪ್ರಶ್ನೆಗೆ ಉತ್ತರಿಸಿದ ಹಜಾರೆ, ರಾಜಕೀಯ ವಿವಾದಗಳಲ್ಲಿ ತಾವು ಪ್ರವೇಶಿಸಲು ಬಯಸುವುದಿಲ್ಲ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !