ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ತನ ಮುಖ್ಯಮಂತ್ರಿ ಯಾಗಿ ಬಿಜೆಪಿ ರೇಖಾ ಗುಪ್ತಾ ಅವರನ್ನು ಆಯ್ಕೆ ಮಾಡಿದೆ. ಹಾಗೇ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿ, ಶಾಸಕರಾದ ಪರ್ವೇಶ್ ವರ್ಮಾ ಅವರಿಗೆ ದೆಹಲಿ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.
ಇಂದು ದೆಹಲಿ ನೂತನ ಮುಖ್ಯಮಂತ್ರಿ ಆಯ್ಕೆಗಾಗಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ಸಭೆಯಲ್ಲಿ ದೆಹಲಿ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಅವರನ್ನು ಆಯ್ಕೆ ಮಾಡಲಾಯಿತು.ಇನ್ನೂ ದೆಹಲಿಯ ನೂತನ ಉಪ ಮುಖ್ಯಮಂತ್ರಿಯನ್ನಾಗಿ ಪರ್ವೇಶ್ ವರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.
ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಮತ್ತು ಆರು ಕ್ಯಾಬಿನೆಟ್ ಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಮುಖ್ಯಮಂತ್ರಿ ಮತ್ತು ಹೊಸ ಕ್ಯಾಬಿನೆಟ್ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.