ಕೇಜ್ರಿವಾಲ್‌, ಕೆ.ಕವಿತಾಗೆ ಜೈಲು ವಾಸ ಕಂಟಿನ್ಯೂ: ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹಾಗೂ ಬಿಆರ್‌ಎಸ್‌ ನಾಯಕಿ ಕೆ.ಕವಿತಾಗೆ ಜೈಲು ವಾಸದಿಂದ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ಇದೀಗ  ಇಬ್ಬರ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ವರೆಗೆ ವಿಸ್ತರಣೆ ಮಾಡಲಾಗಿದೆ.

ಹೊಸ ಮದ್ಯ ನೀತಿ ಹಗರಣದಲ್ಲಿ ಕಳೆದ ತಿಂಗಳು ಬಂಧಿಸಲಾದ ವಿಪಕ್ಷಗಳ ನಾಯಕರಿಗೆ 14 ದಿನಗಳ ನ್ಯಾಯಾಂಗ ಬಂಧನ ಮತ್ತೆ ವಿಸ್ತರಿಸಲಾಗಿದೆ. ದೆಹಲಿಯ ತಿಹಾರ್ ಜೈಲಿನಲ್ಲಿರುವ ಕೇಜ್ರಿವಾಲ್‌ ಮತ್ತು ಕವಿತಾರನ್ನು ಮುಂದಿನ ಮೇ 7 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ಪಾತ್ರ ಗುರುತರವಾಗಿದೆ ಎನ್ನುವುದಕ್ಕೆ, ಮತ್ತು ಅಕ್ರಮದಿಂದ ಬಂದ ಲಾಭವನ್ನು ಮರೆಮಾಚುವ ಪ್ರಯತ್ನ ಮಾಡಿದ್ದರು ಎನ್ನುವುದಕ್ಕೆ ಇಡಿ ಬಲವಾದ ದಾಖಲೆಗಳನ್ನು ಹೊಂದಿದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ವೈಯಕ್ತಿಕವಾಗಿಯೂ ಮತ್ತು ಎಎಪಿ ಪಕ್ಷದ ಸಂಚಾಲಕರಾಗಿಯೂ ಭಾಗಿಯಾಗಿದ್ದರು ಎಂಬುದು ತಿಳಿದುಬರುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!