ಹೊಸದಿಗಂತ ಡಿಜಿಟಲ್ ಡೆಸ್ಕ್:
18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಪ್ರಸ್ತಾವನೆಗೆ ದೆಹಲಿ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಈ ಯೋಜನೆಗೆ ನೋಂದಣಿ ನಾಳೆಯಿಂದ ಪ್ರಾರಂಭವಾಗುತ್ತದೆ. ಆದರೆ, ಮುಂದಿನ 10-15 ದಿನಗಳಲ್ಲಿ ದೆಹಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು, ತಕ್ಷಣವೇ ಹಣ ವರ್ಗಾವಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಸಬ್ಸಿಡಿಯನ್ನು 1,000 ರೂ.ನಿಂದ 2,100 ರೂ.ಗೆ ಹೆಚ್ಚಿಸಲಾಗುವುದು. ಶೀಘ್ರದಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇರುವುದರಿಂದ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡುವಂತಿಲ್ಲ. ಆದರೆ ಮಹಿಳಾ ಸಮ್ಮಾನ್ ಯೋಜನೆ ಎಂಬ ಯೋಜನೆಯ ನೋಂದಣಿ ನಾಳೆಯಿಂದ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.