ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ ಬಂಧನ ಹಾಗೂ ಇಡಿ ಕಸ್ಟಡಿಯನ್ನು ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಇದೇ ವೇಳೆ ತಮ್ಮ ಅರ್ಜಿಯನ್ನು ನಾಳೆಯೇ ವಿಚಾರಣೆ ಮಾಡುವಂತೆಯೂ ಅವರು ನ್ಯಾಯಾಲಯವನ್ನು ಕೋರಿದ್ದಾರೆ.
ಅಬಕಾರಿ ನೀತಿ ಪ್ರಕರಣ ಸಂಬಂಧ ಕೇಂದ್ರ ತನಿಖಾ ಸಂಸ್ಥೆಯಿಂದ ಗುರುವಾರ ಬಂಧಿಸಲ್ಪಟ್ಟ ಕೇಜ್ರಿವಾಲ್ ಅವರನ್ನು ಮಾ.28 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಲಾಗಿದೆ.