ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೀಗ ಬಿಡುಗಡೆಯಾಗಿದ್ದಾರೆ.
ಜೈಲಿನಿಂದ ಹೊರಬಂದ ತಕ್ಷಣ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದು ಶುಕ್ರವಾರ ಸಂಜೆಯಷ್ಟೇ ದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ್ದ ಕೇಜ್ರಿವಾಲ್ ಇಂದು ಬೆಳಗ್ಗೆ 11 ಗಂಟೆಗೆ ತಮ್ಮ ಪತ್ನಿಯೊಂದಿಗೆ ಹನುಮಾನ್ ಮಂದಿರಕ್ಕೆ ಭೇಟಿ ನೀಡಿದ್ದಾರೆ.