ನಾಚಿಕೆಯಿಲ್ಲದೆ ಆರೋಪಿಯೊಂದಿಗೆ ಕೇಜ್ರಿವಾಲ್‌ ತಿರುಗಾಟ: ನಿರ್ಮಲಾ ಸೀತಾರಾಮನ್‌ ವಾಗ್ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಅಪ್ ನಾಯಕಿ, ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯ ಕುರಿತು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಗುಡುಗಿದ್ದಾರೆ.

ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಅವರೊಂದಿಗೆ ಕೇಜ್ರಿವಾಲ್‌ ತಿರುಗಾಡುತ್ತಿದ್ದಾರೆ ಎಂದು ನಿರ್ಮಲಾ ಕಿಡಿಕಾರಿದ್ದಾರೆ.

ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸೀತಾರಾಮನ್, ಎಎಪಿ ಸಂಚಾಲಕರು ಈ ವಿಷಯದ ಬಗ್ಗೆ ಮಾತನಾಡಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ಇ

ಎಎಪಿ ಸಂಸದ ಸಂಜಯ್ ಸಿಂಗ್, ಮಲಿವಾಲ್ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಒಂದು ದಿನದ ನಂತರ ಆರೋಪಿ ಬಿಭವ್ ಕುಮಾರ್ ಅವರು ಲಕ್ನೋದಲ್ಲಿ ಕೇಜ್ರಿವಾಲ್ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ. ಕೇಜ್ರಿವಾಲ್ ಅವರು ತಮ್ಮ ಪಕ್ಷದ ಮಹಿಳಾ ಸಂಸದರ (ರಾಜ್ಯಸಭೆ) ಮೇಲಿನ ದಾಳಿಯ ಬಗ್ಗೆ ಒಂದು ಮಾತನ್ನೂ ಆಡದಿರುವುದು ಸ್ವೀಕಾರಾರ್ಹವಲ್ಲ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಕೇಜ್ರಿವಾಲ್‌ ಅವರ ನಿವಾಸದಲ್ಲಿ ಅವರ ಆಪ್ತ ಸಹಾಯಕರೊಬ್ಬರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್‌ ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ಕೂಡ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಬಿಭವ್‌ ಕುಮಾರ್ ಅವರನ್ನು ಆರೋಪಿ ಎಂದು ಹೆಸರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!