September 29, 2026
Tuesday, September 29, 2026
spot_img

ಪ್ರಧಾನಿ ಮೋದಿ ಪದವಿ ಮಾಹಿತಿ ಪಡೆಯುವ ಕೇಜ್ರಿವಾಲ್‌ ಪ್ರಯತ್ನಕ್ಕೆ ಬ್ರೇಕ್: ಮೇಲ್ಮನವಿ ವಜಾ, 25 ಸಾವಿರ ರೂ. ದಂಡ ಫಿಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಪಡಿಸುವಂತೆ ಕೋರಿ ನಡೆದಿದ್ದ ಕಾನೂನು ಹೋರಾಟದಲ್ಲಿ ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಗುಜರಾತ್ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ಮಂಗಳವಾರ ವಜಾಗೊಳಿಸಿದ್ದು, ಕೇಜ್ರಿವಾಲ್‌ ಮೇಲೆ ವಿಧಿಸಲಾಗಿದ್ದ 25,000 ರೂ ದಂಡವನ್ನೂ ಮುಂದುವರಿಸಿದೆ.

ಮುಖ್ಯ ನ್ಯಾಯಮೂರ್ತಿ ಸುನೀತಾ ಅಗರ್ವಾಲ್ ಹಾಗೂ ನ್ಯಾಯಮೂರ್ತಿ ಡಿ.ಎನ್. ರೇ ಅವರಿದ್ದ ವಿಭಾಗೀಯ ಪೀಠವು, ಏಕಸದಸ್ಯ ಪೀಠದ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ಯಾವುದೇ ಸೂಕ್ತ ಕಾರಣ ಕಂಡುಬಂದಿಲ್ಲ ಎಂದು ಹೇಳಿದೆ. ಇದರೊಂದಿಗೆ ಪ್ರಧಾನಿ ಮೋದಿ ಅವರ ಪದವಿ ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆಯುವ ವಿಚಾರದಲ್ಲಿ ನಡೆದಿದ್ದ ಮತ್ತೊಂದು ಹಂತದ ಕಾನೂನು ಪ್ರಕ್ರಿಯೆ ಅಂತ್ಯಗೊಂಡಿದ್ದು, ಮೇಲ್ಮನವಿಯನ್ನು ವಜಾಗೊಳಿಸಲಾಗಿದೆ ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ:

2016ರಲ್ಲಿ ಕೇಂದ್ರ ಮಾಹಿತಿ ಆಯೋಗವು ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯಗಳಿಗೆ ಪ್ರಧಾನಿ ಮೋದಿ ಅವರ ಪದವಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಕೇಜ್ರಿವಾಲ್‌ಗೆ ನೀಡುವಂತೆ ನಿರ್ದೇಶಿಸಿತ್ತು. ಈ ನಿರ್ದೇಶನವನ್ನು ಎರಡೂ ವಿಶ್ವವಿದ್ಯಾಲಯಗಳು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದವು. ಬಳಿಕ ನ್ಯಾಯಾಲಯ ಮಾಹಿತಿ ಬಹಿರಂಗಪಡಿಸುವ ಕುರಿತ CIC ಆದೇಶಕ್ಕೆ ತಡೆ ನೀಡಿತ್ತು. ನಂತರ ಗುಜರಾತ್ ಹೈಕೋರ್ಟ್‌ನ ಏಕಸದಸ್ಯ ಪೀಠವು CIC ನಿರ್ದೇಶನವನ್ನು ರದ್ದುಗೊಳಿಸಿತ್ತು.

Must Read