ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಸಕ್ತ ಸಾಲಿನ (2023) ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಕಟಗೊಂಡಿದೆ.
ದೇಶದ ಪ್ರತಿಷ್ಟಿತ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಜಿರೋಧ ಸಂಸ್ಥಾಪಕ ನಿತಿನ್ ಕಾಮತ್ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಲ್ಲದೆ, ಜಯದೇವ ಹೃದ್ರೋಗ ಸಂಸ್ಥೆಗೂ ಪ್ರಶಸ್ತಿ ಒಲಿದು ಬಂದಿದೆ.
ಕುಮಾರಕೃಪಾ ಹಳೇ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಪ್ರಶಸ್ತಿ ವಿಜೇತರ ಹೆಸರನ್ನು ಘೋಷಿಸಿದರು.
ಜೂನ್ 27 ರಂದು ನಡೆಯಲಿರುವ ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಕುದುರೆ ಮೇಲೆ ಕುಳಿತಿರುವ ಕೆಂಪೇಗೌಡರ ಪ್ರತಿಮೆಯನ್ನು ಒಳಗೊಂಡಿದೆ. ಬಿಎಲ್ ಶಂಕರ್ ನೇತೃತ್ವದಲ್ಲಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.