‘ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಕೃಷ್ಣ, ನಾರಾಯಣ ಮೂರ್ತಿ, ಪ್ರಕಾಶ್ ಪಡುಕೋಣೆ ಆಯ್ಕೆ

ಹೊಸ ದಿಗಂತ್ ಡಿಜಿಟಲ್ ಡೆಸ್ಕ್:

ನಾಡಪ್ರಭು ಕೆಂಪೇಗೌಡರ ಗೌರವಾರ್ಥ ಈ ವರ್ಷದಿಂದ ಸರಕಾರ ಕೊಡಮಾಡುತ್ತಿರುವ ‘ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಮತ್ತು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿ ಕೊಡಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಜೂನ್ 27ರಂದು ವಿಧಾನಸೌಧದಲ್ಲಿ ನಡೆಯಲಿರುವ ಕೆಂಪೇಗೌಡರ 513ನೇ ಜಯಂತಿ ಕಾರ್ಯಕ್ರಮದಲ್ಲಿ ಮೂವರಿಗೂ ತಲಾ 5 ಲಕ್ಷ ರೂ. ನಗದು ಸಹಿತ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಸಾಧಕರನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರದ ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!