ಕೆಂಪೇಗೌಡರು ದಕ್ಷ, ದೂರದೃಷ್ಟಿಯಿದ್ದಂತಹ ಆಡಳಿತಗಾರ: ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು.

ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!