ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೂನ್ 27ರಂದು ಬೆಂಗಳೂರಿನಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಆಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆ ಮಂಗಳವಾರ ನಡೆಯಿತು. ಜಾಗದ ಸಮಸ್ಯೆ ಕಾರಣಕ್ಕೆ ಸ್ಟೇಡಿಯಂ ಅಥವಾ ಅರಮನೆ ಮೈದಾನದಲ್ಲಿ ಜಯಂತಿ ಮಾಡಲು ಸಲಹೆಗಳು ಬಂದಿದ್ದು, ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಸಂಘ, ಸಂಸ್ಥೆಗಳ ಮುಖಂಡರನ್ನು ಆಹ್ವಾನಿಸಿ ಚರ್ಚೆ ಮಾಡಿದ್ದೇವೆ. ಪಕ್ಷ, ಜಾತಿ, ಧರ್ಮ ದೂರವಿಟ್ಟು ಸಭೆ ಮಾಡಿದ್ದೇವೆ. ಜೂನ್ 27ರಂದು ಬೆಂಗಳೂರಿನಲ್ಲಿ ಜಯಂತಿ ಆಚರಣೆ ಆಗಲಿದೆ ಎಂದು ತಿಳಿಸಿದರು.
ವಿಧಾನಸೌಧದಲ್ಲಿ ಮಾಡಿದರೆ ಜಾಗ ಚಿಕ್ಕದು, ಹಾಗಾಗಿ ಬೇಡ ಎಂದಿದ್ದಾರೆ. ಅರಮನೆ ಮೈದಾನ ಅಥವಾ ಸ್ಟೇಡಿಯಂನಲ್ಲಿ ಮಾಡಿ ಎಂದು ಸಲಹೆ ಬಂದಿದೆ. ಎಲ್ಲಿ ಮಾಡಬೇಕು ಎಂಬುವುದನ್ನು ತೀರ್ಮಾನ ಮಾಡಬೇಕು ಎಂದು ಹೇಳಿದರು.
ಮುಂದಿನ ವರ್ಷದೊಳಗೆ ಕೆಂಪೇಗೌಡ ಪ್ರಾಧಿಕಾರದ ಕಟ್ಟಡ
ಜಯಂತಿಗೆ ಆರು ಕಡೆಯಿಂದ ಜ್ಯೋತಿಗಳು ಬರುತ್ತವೆ. ಎಂದಿನಂತೆ ಕಾರ್ಯಕ್ರಮ ನಡೆಯುತ್ತವೆ. ಸಭೆಯಲ್ಲಿ ಸಾಕಷ್ಟು ಸಲಹೆಗಳು ಬಂದಿವೆ. ಮುನಿಯಪ್ಪ ಅವರ ಒತ್ತಡದ ಮೇಲೆ ಕೆಂಪೇಗೌಡ ಜನ್ಮಸ್ಥಳ ಅಭಿವೃದ್ಧಿ ಆಗಬೇಕು ಎಂಬ ಒತ್ತಡ ಇದೆ. ಅದರ ಬಗ್ಗೆ ಸ್ಥಳ ಪರಿಶೀಲನೆ ಮಾಡಿ ತೀರ್ಮಾನ ಮಾಡುತ್ತೇವೆ. ಮುಂದಿನ ವರ್ಷದೊಳಗೆ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಟ್ಟಡಕ್ಕೆ ನಿರ್ಮಾಣ ಮಾಡಬೇಕು. ಸುಮನಹಳ್ಳಿಯಲ್ಲಿ 5 ಎಕರೆ ನೀಡಿದ್ದೇವೆ. ಸಾಧ್ಯವಾದರೆ ಕೆಂಪೇಗೌಡ ಜಯಂತಿ ದಿನ ಭೂಮಿ ಪೂಜೆ ಮಾಡುತ್ತೇವೆ ಎಂದು ತಿಳಿಸಿದರು.