ಲೋಕಾರ್ಪಣೆಗೊಳ್ಳುವ ಮುನ್ನವೇ ವರ್ಲ್ಡ್ ಬುಕ್​ ಆಫ್ ರೆಕಾರ್ಡ್ಸ್​ಗೆ ಸೇರಿದ ಕೆಂಪೇಗೌಡರ ಪ್ರತಿಮೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜಧಾನಿ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಪ್ರತಿಮೆ ವರ್ಲ್ಡ್ ಬುಕ್​ ಆಫ್ ರೆಕಾರ್ಡ್ಸ್​ಗೆ ಪಾತ್ರವಾಗಿದೆ.

‘ಪ್ರಗತಿಯ ಪ್ರತಿಮೆ’ ಎಂಬ ಹೆಸರಿನಲ್ಲಿ ಸ್ಥಾಪಿತಗೊಂಡಿರುವ, ಸ್ಥಾಪನೆಗೊಂಡಿರುವ ಪ್ರಥಮ ಹಾಗೂ ಅತಿ ಎತ್ತರದ ಕಂಚಿನ ಪ್ರತಿಮೆ ಇದಾಗಿದೆ ಎಂದು ಲಂಡನ್​ನ ವರ್ಲ್ಡ್ ಬುಕ್​ ಆಫ್ ರೆಕಾರ್ಡ್ಸ್​ ಪರಿಗಣಿಸಿದೆ.

ಈ ಪ್ರತಿಮೆಯು 108 ಅಡಿ ಎತ್ತರವಿದ್ದು, 4 ಟನ್ ತೂಕದ ಖಡ್ಗವನ್ನೂ ಹೊಂದಿದೆ.

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅನುಸಾರ ಮೊದಲ ಹಾಗೂ ಅತ್ಯಂತ ಎತ್ತರದ ಕಂಚಿನ ಪ್ರತಿಮೆ ಎಂಬುದು ನಮಗೆ ಹೆಮ್ಮೆಯ ವಿಷಯ. 108 ಅಡಿಯ ಈ ಪ್ರತಿಮೆ ಕೆಂಪೇಗೌಡರ ದೂರದೃಷ್ಟಿಯ ಬೆಂಗಳೂರನ್ನು ಬಿಂಬಿಸುತ್ತದೆ’ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಂತಸವನ್ನು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನ. 11ರಂದು ಈ ಪ್ರಗತಿಯ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!