Thursday, March 30, 2023

Latest Posts

SHOCKING| ಕಣ್ಣೂರಿನಲ್ಲಿ ಬಾಂಬ್ ಸ್ಫೋಟ: ಇಬ್ಬರ ಸ್ಥಿತಿ ಚಿಂತಾಜನಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಭಾನುವಾರ ಸಂಜೆ ಕಣ್ಣೂರು ಜಿಲ್ಲೆಯ ಕಕ್ಕಯಂಗಡದಲ್ಲಿರುವ ಮುಝಕುನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸ್ಫೋಟ ಸಂಭವಿಸಿದೆ ಎಂದು ಘಟನಾ ಸ್ಥಳದ ಪರಿಶೀಲನೆಯ ನಂತರವೇ ಅಧಿಕೃತ ದೃಢೀಕರಣವನ್ನು ಬಹಿರಂಗಪಡಿಸಲಾಯಿತು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಫೋಟದಲ್ಲಿ ಸಂತೋಷ್ ಮತ್ತು ಅವರ ಪತ್ನಿ ಲಸಿತಾ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪರಿಸ್ಥಿತಿ ಚಿಂತಾಜನಕವಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ..

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!