ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಭಾರತದಲ್ಲಿ ಕೊರೋನಾ ಪ್ರಕರಣಗಳು ಅತಿ ಹೆಚ್ಚಾಗಿರುವ ರಾಜ್ಯಗಳ ಪೈಕಿ ಕೇರಳ ಮುಂಚೂಣಿಯಲ್ಲಿದೆ. ಕಳೆದ ವಾರ ಭಾರತದಲ್ಲಿ ಒಟ್ಟು ವರದಿಯಾದ ಪ್ರಕರಣಗಳಲ್ಲಿ ಶೇ.68 ರಷ್ಟು ಕೇರಳದಿಂದ ವರದಿಯಾಗಿದೆ.
ಕಳೆದ 24 ಗಂಟೆಳಲ್ಲಿ 43,263 ಪ್ರಕರಣಗಳು ದೇಶಾದ್ಯಂತ ವರದಿಯಾಗಿದ್ದರೆ ಈ ಪೈಕಿ 32,000 ಪ್ರಕರಣಗಳು ಕೇರಳದಲ್ಲಿ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.
ಭಾರತದಲ್ಲಿ ಒಟ್ಟಾರೆ ಕೋವಿಡ್-19 ಪ್ರಕರಣಗಳು ಇಳಿಕೆಯಾಗುತ್ತಿದ್ದು, ಇಳಿಕೆಯ ಟ್ರೆಂಡ್ ಮೊದಲ ಅಲೆಯಲ್ಲಿದ್ದ ಟ್ರೆಂಡ್ ನ ಶೇ.50 ಕ್ಕಿಂತ ಕಡಿಮೆ ಇದೆ. ಭಾರತದಲ್ಲಿ 2 ನೇ ಅಲೆ ಇನ್ನೂ ಇದ್ದು ಮುಕ್ತಾಯಗೊಂಡಿಲ್ಲ ಎಂದು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಾಹಿತಿ ನೀಡಿದ್ದಾರೆ.