ಬಿಸಿಲಿನ ಕಾವಿಗೆ ಕೆರಳಿ ಕೆಂಡವಾದ ಕೇರಳ: ಶಿಕ್ಷಣ ಸಂಸ್ಥೆ ಚಟುವಟಿಕೆಗಳು ಮೇ 6ರ ತನಕ ಸ್ಥಗಿತ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಸಿಲಿನಿಂದ ಉಂಟಾಗಬಹುದಾದ ಅನಾಹುತಗಳನ್ನು ತಡೆಯುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಶಿಕ್ಷಣ ಸಂಸ್ಥೆಗಳಿಗೆ ಮೇ 6ರ ವರೆಗೆ ರಜೆ ಘೋಷಿಸಲಾಗಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಶಿಕ್ಷಣ ಸಂಸ್ಥೆಗಳು ಆನ್‌ಲೈನ್‌ನಲ್ಲಿ ಮಾತ್ರ ಕೆಲಸ ಮಾಡಲು ಸೂಚಿಸಲಾಗಿದೆ. ಇನ್ನು ವಿದ್ಯಾರ್ಥಿಗಳು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ರಜಾ ಕಾಲದ ತರಗತಿಗಳನ್ನು ತಪ್ಪಿಸಬೇಕು ಎಂದು ಕೂಡಾ ಸರ್ಕಾರ ಸೂಚಿಸಿದೆ.

ಬೆಳಿಗ್ಗೆ 11 ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಯಾವುದೇ ಕ್ರೀಡಾಕೂಟ, ಮೆರವಣಿಗೆ ನಡೆಸಲು ಅನುಮತಿ ನಿರಾಕರಿಸಲಾಗಿದೆ. ವೈದ್ಯಕೀಯ ಕಾಲೇಜು, ನರ್ಸಿಂಗ್ ಕಾಲೇಜಿನ ಮೊದಲ ವರ್ಷದ ತರಗತಿಗಳು ಮಾತ್ರ ಆನ್‌ಲೈನ್‌ನಲ್ಲಿ ನಡೆಯಲಿದ್ದು, ಉಳಿದವು ಗಳಿಗೆ ಈ ನಿರ್ಬಂಧಗಳಿಗೆ ಒಳಪಟ್ಟಿಲ್ಲ. ಆಯುರ್ವೇದ ಮತ್ತು ದಂತ ವೈದ್ಯಕೀಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿಗಳು ಆನ್‌ಲೈನ್‌ನಲ್ಲಿ ನಡೆಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಗರಿಕರಿಗೂ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಕಲ್ನಾರು, ಟಿನ್ ಶೀಟ್ ಕೆಳಗೆ ವಾಸಿಸುವ ಕಾರ್ಮಿಕರನ್ನು ತಕ್ಷಣವೇ ಸ್ಥಳಾಂತರಿಸಲು ಆಯಾ ಮಾಲೀಕರಿಗೆ ಸೂಚನೆ ನೀಡಲಾಗಿದೆ. ದನಗಳನ್ನು ಮಧ್ಯಾಹ್ನ ಮೇಯಲು ಬಿಡಬಾರದು ಎಂದೂ ಸೂಚಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!