ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೇರಳ ವಿಧಾನಸಭಾ ಚುನಾವಣೆ: ಬೆಳಗ್ಗೆ 8 ಗಂಟೆಯಿಂದ 140 ಕ್ಷೇತ್ರಗಳ ಮತಎಣಿಕೆ ಆರಂಭ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸ ದಿಗಂತ ವರದಿ ಕಾಸರಗೋಡು:

ಕೇರಳ ವಿಧಾನಸಭೆಯ ಒಟ್ಟು 140 ವಿಧಾನಸಭಾ ಕ್ಷೇತ್ರಗಳ ಮತಎಣಿಕೆ ಕಾರ್ಯವು ಇಂದು (ಭಾನುವಾರ) ಬೆಳಗ್ಗೆ 8 ಗಂಟೆಗೆ ಆರಂಭಗೊಂಡಿತು. ಇದರೊಂದಿಗೆ ಮಲಪ್ಪುರಂ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶವೂ ಹೊರಬೀಳಲಿದೆ. ರಾಜ್ಯದಲ್ಲಿ ಆಡಳಿತಾರೂಢ ಎಡರಂಗ ಒಕ್ಕೂಟ, ವಿಪಕ್ಷ ಐಕ್ಯರಂಗ ಒಕ್ಕೂಟ ಹಾಗೂ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ನಡುವೆ ಪ್ರಬಲ ಸ್ಪರ್ಧೆ ಕಂಡುಬಂದಿದೆ.

ಕೇರಳದಲ್ಲಿ ಏಪ್ರಿಲ್ 6 ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಇದೇ ವೇಳೆ ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತಎಣಿಕೆಯು ಆರಂಭಗೊಂಡಿದ್ದು , ಆಯಾ ಕೇಂದ್ರಗಳಲ್ಲಿ ನಡೆಯುತ್ತಿದೆ. ಇಂದು ಬೆಳಗ್ಗೆ 7.59ರ ವರೆಗೆ ಅಂಚೆ ಮೂಲಕ ಲಭಿಸಿದ ಪೋಸ್ಟಲ್ ಬ್ಯಾಲೆಟ್ ಗಳನ್ನು ಗಣನೆಗೆ ಪಡೆಯಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಐದು ಮತ ಎಣಿಕೆ ಕೇಂದ್ರಗಳನ್ನು ವ್ಯವಸ್ಥೆಗೊಳಿಸಲಾಗಿದೆ. ಅದರಂತೆ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಮತಎಣಿಕೆಯು ಕುಂಬಳೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ , ಕಾಸರಗೋಡು ವಿಧಾನಸಭಾ ಕ್ಷೇತ್ರದ ಮತಎಣಿಕೆಯು ಕಾಸರಗೋಡು ಸರಕಾರಿ ಕಾಲೇಜಿನಲ್ಲಿ , ಉದುಮ ವಿಧಾನಸಭಾ ಕ್ಷೇತ್ರದ ಮತಎಣಿಕೆಯು ಪೆರಿಯ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ , ಕಾಞಂಗಾಡು ವಿಧಾನಸಭಾ ಕ್ಷೇತ್ರದ ಮತಎಣಿಕೆಯು ಪಡನ್ನಕ್ಕಾಡು ನೆಹರೂ ಕಾಲೇಜಿನಲ್ಲಿ , ತೃಕ್ಕರೀಪ್ಪುರ ವಿಧಾನಸಭಾ ಕ್ಷೇತ್ರದ ಮತಎಣಿಕೆಯು ತೃಕ್ಕರೀಪ್ಪುರ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರಂಭಗೊಂಡಿದೆ. ಕೋವಿಡ್ ಮಾನದಂಡಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಮತಎಣಿಕೆ ನಡೆಯುತ್ತಿದ್ದು , ಇದರೊಂದಿಗೆ ಎಲ್ಲ ಕೇಂದ್ರಗಳಲ್ಲೂ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss