ಕೇರಳ ಸ್ಫೋಟ ಪ್ರಕರಣ: ತನಿಖೆಗೆ 20 ಸದಸ್ಯರ ವಿಶೇಷ ತಂಡ ರಚಿಸಿ ಸಿಎಂ ಪಿಣರಾಯಿ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌‌

ಕೇರಳ ಸ್ಫೋಟದ ಬಗ್ಗೆ ತನಿಖೆ ನಡೆಸಲು 20 ಸದಸ್ಯರ ವಿಶೇಷ ತಂಡವನ್ನು ರಚಿಸಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಭಾನುವಾರ ಆದೇಶಿಸಿದ್ದಾರೆ.

ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಕಲಮಸ್ಸೆರಿಯಲ್ಲಿ ನಡೆದ ಘಟನೆ ತುಂಬಾ ದುರದೃಷ್ಟಕರ.ಪ್ರಸ್ತುತ, 41 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. 27 ಜನರನ್ನು ಎರ್ನಾಕುಲಂ ವೈದ್ಯಕೀಯ ಕಾಲೇಜಿನಲ್ಲಿ ದಾಖಲಿಸಲಾಗಿದೆ ಎಂದರು.

ಸ್ಪೋಟಕ ಪ್ರಕರಣದಲ್ಲಿ ಸಣ್ಣಪುಟ್ಟ ಗಾಯವಾಗಿದ್ದ 4 ಮಂದಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. 2 ಜನರು ಸಾವನ್ನಪ್ಪಿದ್ದಾರೆ. 5 ಜನರ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ನೀಡಿದರು.

ಸ್ಪೋಟಕ ಪ್ರಕರಣ ಸಂಬಂಧ ತನಿಖೆ ನಡೆಸಲು ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ ನೇತೃತ್ವದ ವಿಶೇಷ ತಂಡ ರಚಿಸಲಾಗಿದೆ. ಈ ತನಿಖಾ ತಂಡದಲ್ಲಿ 20 ಸದಸ್ಯರು ಇರಲಿದ್ದಾರೆ. ನಾಳೆ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!