ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೇರಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ಯೆಹೋವನ ಪ್ರಾರ್ಥನಾ ಸಭೆ ವೇಳೆ ಸಂಭವಿಸಿದ ಭೀಕರ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 12 ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಮೂಲಕ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದ್ದು, ಒಟ್ಟು 52 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶೇ 95ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಬಾಲಕಿ ಲಿಬಿನಾಗೆ ಕಲಮಸ್ಸೇರಿ ವೈದ್ಯಕೀಯ ಕಾಲೇಜಿನ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 12:40ರ ಸುಮಾರಿಗೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಕೇರಳದ ಕಲಮಸ್ಸೇರಿ ಎಂಬಲ್ಲಿ ಜಿಹೋವನರ ಪ್ರಾರ್ಥನಾ ಸಭೆ ವೇಳೆ ಸರಣಿ ಸ್ಪೋಟ ಸಂಭವಿಸಿದೆ. ಈ ವೇಳೆ ಪ್ರಾರ್ಥನಾ ಸಭೆಯಲ್ಲಿ ಸುಮಾರು 2000 ಜನರಿದ್ದರು. ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.