ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶವನ್ನೇ ಬೆಚ್ಚಿಬೀಳಿಸಿರುವ ಕೇರಳದ ಕಲಮಸ್ಸೆರಿ ಯೆಹೋವನ ಸಾಕ್ಷಿ ಸಮಾವೇಶದ ವೇಳೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡವರ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಸ್ಫೋಟದ ಸಮದರ್ಬ ಗಾಯಗೊಂಡವರನ್ನು ವೈದ್ಯಕೀಯ ಕಾಲೇಜು ಮತ್ತು ಇತರ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ 12 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಮದು ಆರೋಗ್ಯ ಸಚಿವೆ ವೀಣಾ ಜೋರ್ಜ್ ತಿಳಿಸಿದ್ದಾರೆ.
ಗಾಯಗೊಂಡ ಎಲ್ಲರಿಗೂ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರ ಸ್ಥಿತಿಯಲ್ಲಿರುವ ಗಾಯಾಳುಗಳಿಗೆ ಅಗತ್ಯ ವೈದ್ಯರ ಮೂಲಕ ಕಾಳಜಿ ವಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.