ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದ ಪವಿತ್ರ ಯಾತ್ರಾಸ್ಥಳವಾದ ಶಬರಿಮಲೆ ಶ್ರೀ ಅಯ್ಯಪ್ಪ ಸನ್ನಿಧಿಯಲ್ಲಿ ಭಕ್ತರ ದಟ್ಟಣೆಯಿಂದ ಹೆಚ್ಚುತ್ತಿರುವ ಸಮಸ್ಯೆಗಳ ನಿಯಂತ್ರಣಕ್ಕಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ತುರ್ತು ಪರಿಶೀಲನಾ ಸಭೆ ಕರೆದಿದ್ದಾರೆ.
ಆನ್‌ಲೈನ್ ಮೂಲಕ ನಡೆಯಲಿರುವ ಈ ಸಭೆಯಲ್ಲಿ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ದೇವಸ್ವಂ ಮಂಡಳಿಯ ಅಧ್ಯಕ್ಷರು, ಆಯುಕ್ತರು, ರಾಜ್ಯ ಪೊಲೀಸ್ ಮುಖ್ಯಸ್ಥರ ಸಹಿತ ಹಲವರು ಪಾಲ್ಗೊಳ್ಳಲಿದ್ದಾರೆ.
ಶ್ರೀ ಕ್ಷೇತ್ರದಲ್ಲಿ ಉಂಟಾಗುತ್ತಿರುವ ಭಕ್ತ ದಟ್ಟಣೆ ನಿಯಂತ್ರಿಸಲು ಕೇರಳ ಹೈಕೋರ್ಟ್ ಕೂಡ ಮಧ್ಯಪ್ರವೇಶ ಮಾಡಿತ್ತು. ಇದಾದ ಬಳಿಕವೂ ಸನ್ನಿಧಾನನಲ್ಲಿ ಜನಸಂದಣಿ ನಿಯಂತ್ರಿಸುವ ವೇಳೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಇವೆಲ್ಲವುಗಳ ನಡುವೆ ಸಿಎಂ ಪಿಣರಾಯಿ ಕರೆದಿರುವ ಈ ಸಭೆ ಬಹಳಷ್ಟು ಮಹತ್ವ ಪಡೆದುಕೊಂಡಿದೆ.