spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಜಯದಶಮಿ ಸಂಭ್ರಮ: ಪುಟಾಣಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್!

- Advertisement -Nitte

ಹೊಸ ದಿಗಂತ ವರದಿ,ಕಾಸರಗೋಡು:

ವಿಜಯದಶಮಿ ಹಾಗೂ ವಿದ್ಯಾದಶಮಿ ದಿನವಾದ ಶುಕ್ರವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಿರುವನಂತಪುರದಲ್ಲಿ ಪುಟಾಣಿ ಮಕ್ಕಳಿಗೆ ಮೊದಲ ಅಕ್ಷರಾಭ್ಯಾಸ ಮಾಡಿ ಪರಂಪರೆ ನೆನಪಿಸಿದರು. ಅಕ್ಷರಾಭ್ಯಾಸದ ಮೊದಲ ದಿನದಂದು ಅನೇಕ ಮಕ್ಕಳು ಜ್ಞಾನದ ಪ್ರಪಂಚಕ್ಕೆ ತಮ್ಮ ಮೊದಲ ಹೆಜ್ಜೆಗಳನ್ನು ಇಡುತ್ತಾರೆ. ಮಕ್ಕಳಾದ ನೇಹಾ, ನಿಯಾ, ಕಣಿ, ಫಿಡೆಲ್ ಕೂಡ ಅಕ್ಷರ ಲೋಕಕ್ಕೆ ಪಾದಾರ್ಪಣೆಗೈದಿರುವರು ಎಂದು ಮುಖ್ಯಮಂತ್ರಿ ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಜ್ಞಾನವು ಸಮಾಜವನ್ನು ಪ್ರಗತಿಯತ್ತ ಕೊಂಡೊಯ್ಯುತ್ತದೆ. ಅದಕ್ಕಾಗಿಯೇ ಶಿಕ್ಷಣವನ್ನು ಬಹಳ ಮುಖ್ಯವಾದ ಸಾಮಾಜಿಕ ಚಟುವಟಿಕೆಯೆಂದು ಪರಿಗಣಿಸಲಾಗಿದೆ. ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ದೀರ್ಘಕಾಲದಿಂದ ಮುಚ್ಚಲ್ಪಟ್ಟಿದ್ದ ಶಾಲೆಗಳು ಕೆಲವೇ ದಿನಗಳಲ್ಲಿ ಮತ್ತೆ ತೆರೆಯಲಿರುವುದು ಶುಭ ಸುದ್ದಿ ಎಂದು ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದರು.
ನಮ್ಮ ಮಕ್ಕಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ಮತ್ತು ಸಮಾಜಕ್ಕೆ ಉಜ್ವಲ ಭವಿಷ್ಯವನ್ನು ಒದಗಿಸಲು ನಾವು ಒಟ್ಟಾಗಿ ನಿಲ್ಲೋಣ. ಎಲ್ಲರಿಗೂ ಮಹಾನವಮಿ ಮತ್ತು ವಿಜಯದಶಮಿಯ ಶುಭಾಶಯಗಳು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಫೇಸ್ ಬುಕ್ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss