Sunday, February 5, 2023

Latest Posts

ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಚರ್ಚಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

ಹೊಸದಿಗಂತ ಡಿಜಿಟಲ್ ಡೆಸ್ಕ್‌
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯ ಅಧಿಕೃತ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಪರಿಸರ ಸೂಕ್ಷ್ಮ ವಲಯಗಳನ್ನು (ಇಎಸ್‌ಜೆಡ್) ಜಾರಿಗೊಳಿಸುವುದನ್ನು ವಿರೋಧಿಸಿ ಅರಣ್ಯ ಪ್ರದೇಶಗಳಿಗೆ ಸಮೀಪವಿರುವ ಪ್ರದೇಶಗಳ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಚರ್ಚೆ ಮಹತ್ವ ಪಡೆದಿದೆ.
ಸಭೆಯ ಛಾಯಾಚಿತ್ರಗಳನ್ನು ಹೊರತುಪಡಿಸಿ, ಇತರ ಯಾವುದೇ ವಿವರಗಳನ್ನು ಮುಖ್ಯಮಂತ್ರಿ ಕಚೇರಿ (ಸಿಎಂಒ) ಬಿಡುಗಡೆ ಮಾಡಿಲ್ಲ.
ಸಭೆಯಲ್ಲಿ ಇಎಸ್‌ಜೆಡ್ ಸಮಸ್ಯೆ ಚರ್ಚೆಯಾಗುವ ಸಾಧ್ಯತೆಯಿದೆ ಎಂದು ಸೋಮವಾರ ಅಧಿಕೃತ ಮೂಲವೊಂದು ತಿಳಿಸಿತ್ತು. ಅದಲ್ಲದೆ, ಉತ್ತರದ ಕಾಸರಗೋಡಿನಿಂದ ದಕ್ಷಿಣದ ತಿರುವನಂತಪುರಕ್ಕೆ ಸಂಪರ್ಕ ಕಲ್ಪಿಸುವ ಸಿಲ್ವರ್‌ಲೈನ್, ಸೆಮಿ ಹೈಸ್ಪೀಡ್ ರೈಲು ಯೋಜನೆಗೆ ಕೇಂದ್ರ ಸರ್ಕಾರದ ಅನುಮತಿ ಪಡೆಯುವಲ್ಲಿ ವಿಳಂಬ ಮತ್ತು COVID-19 ಸಾಂಕ್ರಾಮಿಕ ಸಮಯದಲ್ಲಿ ರಾಜ್ಯದಲಲಿನ ಆರ್ಥಿಕ ಬಿಕ್ಕಟ್ಟು ಚರ್ಚೆಯ ವಿಷಯವಾಗಿವೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!