ಸಿದ್ದರಾಮಯ್ಯ ಪ್ರಮಾಣ ವಚನಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಆಹ್ವಾನವಿಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಈ ಸಮಾರಂಭಕ್ಕೆ ವಿವಿಧ ರಾಜ್ಯಗಳ ಸಿಎಂ ,ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿದ್ದು, ಆದ್ರೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಆಹ್ವಾನಿಸಿಲ್ಲ.

ನೆರೆಯ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸೇರಿದಂತೆ ಇತರರಿಗೆ ಆಹ್ವಾನ ನೀಡಲಾಗಿದ್ದು, ಮೇ 20 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದೀಗ ಎಲ್ಡಿಎಫ್ ಅಸಮಾಧಾನ ಹೊರಹಾಕಿದ್ದು, ಕೇರಳ ಸಿಎಂಗೆ ಆಹ್ವಾನ ನೀಡದಿರುವುದು ಬಿಜೆಪಿಯ “ಫ್ಯಾಸಿಸ್ಟ್” ರಾಜಕೀಯದ ವಿರುದ್ಧ ದೇಶದ ಜಾತ್ಯತೀತ ಪ್ರಜಾಸತ್ತಾತ್ಮಕ ಶಕ್ತಿಗಳನ್ನು ಒಗ್ಗೂಡಿಸುವ ಧ್ಯೇಯ ಸಾಧಿಸಲು ಸಾಧ್ಯವಿಲ್ಲ ಎಂದು ಎಲ್ಡಿಎಫ್ ಸಂಚಾಲಕ ಇ ಪಿ ಜಯರಾಜನ್ ಹೇಳಿದ್ದಾರೆ.

ಕಾಂಗ್ರೆಸ್ ಈಗ ದೇಶದಲ್ಲಿ ಯಾವ ಬಿಜೆಪಿ ವಿರೋಧಿ ನಿಲುವು ಅನುಸರಿಸಲಿದೆ? ಪ್ರಶ್ನಿಸಿದ ಜಯರಾಜನ್, ಈ ಕ್ರಮವು ವಿರೋಧ ಪಕ್ಷದ “ಅಪ್ರಬುದ್ಧ” ರಾಜಕೀಯ ಮತ್ತು ಅದರ ನಿರ್ದೇಶನ ಕೊರತೆಯ ಸೂಚನೆಯಾಗಿದೆ” ಎಂದು ಹೇಳಿದ್ದಾರೆ.

ರಾಷ್ಟ್ರ ರಾಜಕೀಯ ಮತ್ತು ದೇಶದ ಬೆಳವಣಿಗೆಗಳನ್ನು ಅವಲೋಕಿಸುವ ಮತ್ತು ಮೌಲ್ಯಮಾಪನ ಮಾಡುವಲ್ಲಿ ಕಾಂಗ್ರೆಸ್ ನಾಯಕತ್ವ ದುರ್ಬಲವಾಗಿದೆ ಎಂಬುದನ್ನು ಇದು ಸಾಬೀತುಪಡಿಸಿದೆ ಎಂದು ಮಾರ್ಕ್ಸ್ವಾದಿ ಪಕ್ಷದ ನಾಯಕ ಆರೋಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!