Tuesday, March 28, 2023

Latest Posts

ರಾಜಕೀಯ ಕಾರಣಗಳಿಗಾಗಿ ಸಿಸೋಡಿಯಾ ಅವರ ಬಂಧನ ಎಂಬ ಅಭಿಪ್ರಾಯ ಹೋಗಲಾಡಿಸಿ : ಪ್ರಧಾನಿಗೆ ಕೇರಳ ಸಿಎಂ ಪತ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಹಲವು ವಿರೋಧ ಪಕ್ಷಗಳು ಎತ್ತಿರುವ ಪ್ರತಿಭಟನೆಯ ಧ್ವನಿಯನ್ನು ಉಲ್ಲೇಖಿಸಿದ್ದಾರೆ.

ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ವಿಜಯನ್, ರಾಜಕೀಯ ಕಾರಣಗಳಿಗಾಗಿ ಸಿಸೋಡಿಯಾ ಬಂಧನವಾಗಿದೆ ಎಂಬ ಅಭಿಪ್ರಾಯ ಹೋಗಲಾಡಿಸಿ ಎಂದು ಒತ್ತಾಯಿಸಿದ್ದಾರೆ.

2021-22ರ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಬಂಧಿಸಿತ್ತು.

ಸಿಸೋಡಿಯಾ ಬಂಧನವು ಕೇಂದ್ರ ತನಿಖಾ ಸಂಸ್ಥೆಗಳ ಕೆಲವು ಕ್ರಮಗಳ ಬಗ್ಗೆ ವಾದಕ್ಕೆ ಮತ್ತಷ್ಟು ಬಲವನ್ನು ನೀಡಿದೆ ಎಂದು ವಿಜಯನ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!