Tuesday, August 16, 2022

Latest Posts

ಕೇರಳ ಚುನಾವಣೆ: ಕಾಸರಗೋಡು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕೆ. ಶ್ರೀಕಾಂತ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇರಳ ವಿಧಾನಸಭೆ ಚುನಾವಣೆಗೆ ಬಿಜೆಪಿ ೧೧೬ ಜನರ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿದೆ.
ಕೇರಳ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಮಂಜೇಶ್ವರಂ ಮತ್ತು ಕೊನ್ನಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಮೆಟ್ರೋ ಮ್ಯಾನ್ ಎಂದೇ ಖ್ಯಾತರಾದ ಇ ಶ್ರೀಧರನ್ ಅವರು ಬಿಜೆಪಿ ಟಿಕೆಟ್ ಪಡೆದು ಪಾಲಕ್ಕಾಡ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಇನ್ನು ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಕಾಸರಗೋಡು ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಅದೇ ರೀತಿ ಬಿಜೆಪಿ ಧರ್ಮೋದಮ್ ನಿಂದ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಸಿಕೆ ಪದ್ಮನಾಭನ್ ಅವರನ್ನು ಕಣಕ್ಕಿಳಿಸಿದೆ.
ಏಪ್ರೀಲ್ 6 ರಂದು ಕೇರಳ ವಿಧಾನಸಭೆಗೆ ಚುನಾವಣೆ ಜರುಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss