Thursday, August 11, 2022

Latest Posts

ಕೇರಳ ಚುನಾವಣೆ: ಮಂಜೇಶ್ವರದಿಂದ ಕೆ.ಸುರೇಂದ್ರನ್, ಪಾಲಕ್ಕಾಡ್ ಕ್ಷೇತ್ರದಿಂದ ‘ಮೆಟ್ರೋ ಮ್ಯಾನ್’ಗೆ ಬಿಜೆಪಿ ಟಿಕೆಟ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇರಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಕ್ಷೇತ್ರ ಹಾಗು ಪಥನಮತ್ತಟ್ಟದ ಕೊನ್ನಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಇನ್ನು ಮೆಟ್ರೋ ಮ್ಯಾನ್ ಖ್ಯಾತಿಯ ಮತ್ತು ಸಿಎಂ ಅಭ್ಯರ್ಥಿ ಎಂದೇ ಹೇಳಲಾಗುತ್ತಿರುವ ಇ. ಶ್ರೀಧರನ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, ಅವರು ಪಾಲಕ್ಕಾಡ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ಕೇರಳ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕುಮ್ಮನಮ್ ರಾಜಶೇಖರನ್ ಅವರು ನೆಮೊಮ್ ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಕಂಜಿರಪಲ್ಲಿ ವಿಧಾನಸಭೆ ಕ್ಷೇತ್ರದಿಂದ ಆಲ್ಫಾನ್ಸೊ, ತ್ರಿಶೂರ್ ಅಸೆಂಬ್ಲಿ ಕ್ಷೇತ್ರದಿಂದ ಸುರೇಶ್ ಗೋಪಿ ಸ್ಪರ್ಧಿಸಲಿದ್ದಾರೆ. ಡಾ. ಅಬ್ದುಲ್ ಸಲಾಂ ತಿರೂರು ಕ್ಷೇತ್ರದಿಂದ, ಮಾಜಿ ಡಿಜಿಪಿ ಜಾಕೊಬ್ ಥಾಮಸ್ ಅವರು ಇರಿಂಜಲಕುಡ ಎಸೆಂಬ್ಲಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss