Wednesday, December 17, 2025

ಕೇರಳ ಚುನಾವಣೆ | 26 ಮತಗಳ ಅಂತರದಿಂದ ಸೋಲು: ಎಲ್‌ಡಿಎಫ್ ಅಭ್ಯರ್ಥಿ ಕುಸಿದು ಬಿದ್ದು ಸಾವು!

ತಿರುವನಂತಪುರಂ ಕಾರ್ಪೊರೇಷನ್‌ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್‌ (ಯುಡಿಎಫ್) ಅಭ್ಯರ್ಥಿ ವಿ.ಆರ್. ಸಿನಿ (50) ಅವರು ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಎಡವಕೋಡ್ ವಾರ್ಡ್‌ನಿಂದ ಯುಡಿಎಫ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸಿನಿ, ಶ್ರೀಕಾರ್ಯಂ ಇಲಂಕುಲಂನಲ್ಲಿರುವ ತಮ್ಮ ನಿವಾಸದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾದರೂ, ಮಾರ್ಗಮಧ್ಯೆಯಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನಿನ್ನೆ ಪ್ರಕಟವಾದ ಚುನಾವಣಾ ಫಲಿತಾಂಶದಲ್ಲಿ ಸಿನಿ ಕೇವಲ 26 ಮತಗಳ ಅಂತರದಿಂದ ಸೋಲು ಕಂಡಿದ್ದರು ಎಂಬುದು ಗಮನಾರ್ಹವಾಗಿದೆ.

ವಿ.ಆರ್. ಸಿನಿ ಈ ಹಿಂದೆ ತಿರುವನಂತಪುರಂ ಕಾರ್ಪೊರೇಷನ್‌ನ ಕೌನ್ಸಿಲರ್ ಆಗಿ ಕಾರ್ಯನಿರ್ವಹಿಸಿದ್ದರು. ತಿರುವನಂತಪುರಂ ವೈದ್ಯಕೀಯ ಕಾಲೇಜಿನಿಂದ ಫಾರ್ಮಸಿ ಪದವಿ ಪಡೆದಿದ್ದ ಅವರು, ವೃತ್ತಿಯಿಂದ ಉದ್ಯಮಿಯಾಗಿದ್ದು, ನಗರದಲ್ಲಿ ಸ್ವಂತ ಮೆಡಿಕಲ್ ಅಂಗಡಿಯನ್ನು ನಡೆಸುತ್ತಿದ್ದರು. ಸ್ಥಳೀಯ ರಾಜಕೀಯ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಸಿನಿಯ ಅಕಾಲಿಕ ನಿಧನಕ್ಕೆ ಯುಡಿಎಫ್ ನಾಯಕರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.

error: Content is protected !!