ಕೇಂದ್ರದ ವಿರುದ್ಧ ದೆಹಲಿಯಲ್ಲಿ ಕೇರಳ ಸರಕಾರದ ಪ್ರತಿಭಟನೆ: ಕೇಜ್ರೀವಾಲ್, ಭಗವಂತ್ ಮಾನ್ ಸಾಥ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರಕಾರದ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರತಿಭಟನೆ ನಡೆಸಿದರು. ಕೇಂದ್ರದಿಂದ ಬಂದಿರುವ ಹಣದ ವಿಚಾರದಲ್ಲಿ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ದೆಹಲಿ ಸಿಎಂ ಅರವಿಂದ್ ಕೇಜ್ರೀವಾಲ್​, ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಪ್ರತಿಭಟನಾ ವೇದಿಕೆಗೆ ಆಗಮಿಸಿ ತಮ್ಮ ಒಗ್ಗಟ್ಟು ವ್ಯಕ್ತಪಡಿಸಿದರು.

ಮತ್ತೊಂದೆಡೆ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಪಿ ಇದರಲ್ಲಿ ಭಾಗವಹಿಸಲು ನಿರಾಕರಿಸಿದೆ. ಆದ್ರೆ ಕರ್ನಾಟಕದ ಕಾಂಗ್ರೆಸ್​ ಮುಖಂಡರು ಹಾಗೂ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದರು. ಕರ್ನಾಟಕ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆದಿದ್ದು, ಕೇರಳ ಸಿಎಂ ಕೂಡ ಅದೇ ಹಾದಿ ಹಿಡಿದಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!