ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಇಂದು (ಮಂಗಳವಾರ) ಪಾಲಕ್ಕಾಡ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ದೀಪ ಬೆಳಗಿಸುವಾಗ ಅವರ ಶಾಲಿಗೆ ಬೆಂಕಿ ತಗುಲಿದೆ. ತಕ್ಷಣ ಆ ಬೆಂಕಿಯನ್ನು ಆರಿಸಲಾಯಿತು. ಇದರಿಂದ ಅವರು ಅವಘಡದಿಂದ ಪಾರಾಗಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ದೀಪ ಬೆಳಗಿಸುವಾಗ ರಾಜ್ಯಪಾಲರು ಧರಿಸಿದ್ದ ಶಾಲಿಗೆ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ನಂದಿಸಲಾಯಿತು. ಆದರೆ ಯಾರಿಗೂ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.