ಉಮ್ಮನ್ ಚಾಂಡಿ ನಿಧನ: ಗೌರವಾರ್ಥವಾಗಿ ಸಾರ್ವಜನಿಕ ರಜೆ ಘೋಷಿಸಿದ ಕೇರಳ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಮುಂಜಾನೆ ಬೆಂಗಳೂರಿನಲ್ಲಿ ಅನಾರೋಗ್ಯದಿಂದ ನಿಧನರಾದ ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಅವರಿಗೆ ಗೌರವ ಸಮರ್ಪಿಸುವ ಸಲುವಾಗಿ ಕೇರಳ ಸರ್ಕಾರ ಮಂಗಳವಾರ ಸಾರ್ವಜನಿಕ ರಜೆ ಘೋಷಿಸಿದೆ.

ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಮಂಗಳವಾರ ಮುಚ್ಚಲ್ಪಡುತ್ತವೆ. ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆ ನಡೆಯಲಿದೆ.

ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯವು ಜುಲೈ 18 ರಂದು ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!