ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ, ಆರೆಂಜ್‌ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅರಬ್ಬೀ ಸಮುದ್ರದಿಂದ ದಕ್ಷಿಣ ಭಾರತದ ಕಡೆ ಕಡಿಮೆ ಉಷ್ಣತೆಯಲ್ಲಿ ಪಶ್ಚಿಮ ಗಾಳಿಯು ಬಲವಾಗಿ ಬೀಸಿದ ಪರಿಣಾಮ ಕೇರಳದ ಹಲವಾರು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಮುಂದಿನ ಕೆಲ ದಿನಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕೇರಳದ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ದಕ್ಷಿಣ ರಾಜ್ಯದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆ ಕೊಟ್ಟಿದ್ದಾರೆ.

ಕೊಟ್ಟಾಯಂನಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ, ನದಿಗಳು ಉಕ್ಕಿ ಹರಿದಿದ್ದು, ವಿದ್ಯುತ್ ತಂತಿಗಳು ಹಾನಿಗೊಳಗಾಗಿವೆ ಮತ್ತು ನೂರಾರು ಎಕರೆ ಬೆಳೆ ನಾಶವಾಗಿದೆ. ಈ ನಡುವೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮುಂಗಾರು ಪೂರ್ವ ಸಿದ್ಧತೆ ಕುರಿತು ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಿ, ಎಲ್ಲಾ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!