ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ರಾಜ್ಯದಲ್ಲಿ ಬೀದಿನಾಯಿಗಳ ದಾಳಿ ಬರೋಬ್ಬರಿ ಮೂರುಪಟ್ಟು ಹೆಚ್ಚಿದೆ ಎಂದು ಅಂಕಿಅಂಶ ಬಹಿರಂಗಪಡಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವೆ ವೀಣಾ ಜಾರ್ಜ್, ನಾಯಿ ದಾಳಿಯ ಬೆನ್ನಲ್ಲಿ ರೇಬಿಸ್ ಭಯ ಹೆಚ್ಚಿದೆ. ಹೀಗಾಗಿ ಎಲ್ಲಾ ಸಾಕು ನಾಯಿಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಆರೋಗ್ಯ ಇಲಾಖೆ ನೇತೃತ್ವದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನಾಯಿ ಸಾಕಲು ಸ್ಥಳೀಯಾಡಳಿತ ಇಲಾಖೆ ಪರವಾನಿಗೆ ಕಡ್ಡಾಯವಾಗಲಿದೆ. ನಾಯಿಗಳಿಗೆ ವ್ಯಾಕ್ಸಿನೇಷನ್ ಮಾಹಿತಿ ಚಿಪ್ ಅಳವಡಿಸಲು ಚಿಂತನೆ ನಡೆದಿದೆ. ಬೀದಿ ನಾಯಿಗಳಿಗೆ ರೋಗನಿರೋಧಕ ಚುಚ್ಚುಮದ್ದು ನೀಡಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿ ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯಿಂದ ಮಾನ್ಯತೆ ಪಡೆದ ಸಂಸ್ಥೆಗಳ ಸೇವೆಯನ್ನು ಬಳಸಿಕೊಳ್ಳಲಾಗುವುದು ಎಂದು ಸಚಿವೆ ಹೇಳಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ