Friday, July 1, 2022

Latest Posts

BREAKING NEWS ಕೊರೋನಾ ಹೊಡೆತಕ್ಕೆ ದೇವರ ನಾಡು ಸ್ತಬ್ಧ: ಮೇ.8 ರಿಂದ ಕೇರಳ ಸಂಪೂರ್ಣ ಲಾಕ್!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ಸೋಂಕಿನ ಆರ್ಭಟ ಹೆಚ್ಚಾಗಿದ್ದು, ಮೇ.8 ರಿಂದ 16 ರವರೆಗೆ ಕೇರಳ ಸಂಪೂರ್ಣ ಲಾಕ್ ಆಗಲಿದೆ.
ಕೇರಳ ಮುಖ್ಯಮಂತ್ರಿ ವಿಜಯನ್ ಪಿಣರಾಯಿ ಟ್ವೀಟ್ ಮಾಡಿದ್ದು, ಕೊರೋನಾ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೇ.8 ರಿಂದ 16 ರವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಮಾಡಲಾಗಿದೆ ಎಂದಿದ್ದಾರೆ.
ಕೇರಳದಲ್ಲಿ ಕೊರೋನಾ ಸೋಂಕು ಏರಿಕೆಯಾಗುತ್ತಲೇ ಇದ್ದು, ಒಂದೇ ದಿನ 41,953 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss