ಅತ್ಯಾಚಾರ ಆರೋಪಿಗೆ 142 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೇರಳ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
10 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಮೇಲೆ ಎರಡು ವರ್ಷಗಳ ಕಾಲ ಅತ್ಯಾಚಾರ ಎಸಗಿದ 41 ವರ್ಷದ ವ್ಯಕ್ತಿಗೆ 142 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಿ ಕೇರಳದ ಪತ್ತನಂತಿಟ್ಟ ಪೋಕ್ಸೋ ಕೋರ್ಟ್‌ ಆದೇಶಿಸಿದೆ.
ಆನಂದನ್ ಪಿ ಆರ್ ಅಲಿಯಾಸ್ ಬಾಬು ಎಂದು ಗುರುತಿಸಲಾದ ವ್ಯಕ್ತಿಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ನ್ಯಾಯಾಲಯವು ವ್ಯಕ್ತಿಗೆ ಗರಿಷ್ಠ ಶಿಕ್ಷೆಯನ್ನು ನೀಡಿದೆ. ಒಂದು ವೇಳೆ ಆರೋಪಿಯು ದಂಡವನ್ನು ಪಾವತಿಸದಿದ್ದರೆ, ಅವನು ಇನ್ನೂ ಮೂರು ವರ್ಷಗಳ ಹೆಚ್ಚುವರಿ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ಹೇಳಿದೆ. ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ ನೀಡಲಾದ ಗರಿಷ್ಠ ಶಿಕ್ಷೆಯ ಅವಧಿ ಇದಾಗಿದೆ.
ಆನಂದನ್ 2019 ರಿಂದ 2021 ರ ನಡುವಿನ ಅವಧಿಯಲ್ಲಿ 10 ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದೆ. ಆ ಎರಡು ವರ್ಷಗಳ ಅವಧಿಯಲ್ಲಿ ಆಕೆಯ ಮೇಲೆ ಅಮಾನುಷ ರೀತಿಯಲ್ಲಿ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ತಿರುವಲ್ಲಾ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಾಬು ಬಾಲಕಿಯ ಸಂಬಂಧಿಕನಾಗಿದ್ದು, ಮಗುವಿನ ಪೋಷಕರು ಅದೇ ನಿವಾಸದಲ್ಲಿ ಇರುತ್ತಿದ್ದ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!