ಸಾವು ಗೆದ್ದ ಕೇರಳದ ನರ್ಸ್! ನಿಮಿಷಾ ಪ್ರಿಯಾ ಮರಣದಂಡನೆ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಯೆಮನ್‌ನಲ್ಲಿ ಮರಣದಂಡನೆಯನ್ನು ಎದುರಿಸುತ್ತಿದ್ದ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಗಲ್ಲು ಶಿಕ್ಷೆಯಿಂದ ಮುಕ್ತಿಗೊಳಿಸಲಾಗಿದೆ.

ಅವರಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಈಗ ಶಾಶ್ವತವಾಗಿ ರದ್ದುಪಡಿಸಲಾಗಿದೆ. ಈ ಸಂಬಂಧದ ಮಾಹಿತಿಯನ್ನು ಭಾರತೀಯ ಗ್ರ್ಯಾಂಡ್ ಮುಫ್ತಿ, ಕಾಂತಪುರಂ ಎಪಿ ಅಬುಬಕ್ಕರ್ ಮುಸ್ಲೈಯರ್ ಅವರ ಕಚೇರಿ ಹಂಚಿಕೊಂಡಿದೆ. ಇದಕ್ಕೂ ಮೊದಲು, ಯೆಮನ್‌ನಲ್ಲಿನ ಅಧಿಕಾರಿಗಳು ರಾಜತಾಂತ್ರಿಕ ಮಧ್ಯಸ್ಥಿಕೆಗಳ ನಂತರ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಿದ್ದರು. ಈ ನಿಮಿಷಾ ಪ್ರಿಯಾ ಪ್ರಕರಣ ಇಡೀ ಜಗತ್ತಿನಾದ್ಯಂತ ಚರ್ಚೆಯಾಗಿತ್ತು.

ಜುಲೈ 16ರಂದು ನಿಮಿಷಾ ಪ್ರಿಯಾಳಿಗೆ ನೇಣಿಗೇರಿಸಲು ದಿನ ನಿಗದಿಯಾಗಿತ್ತು. ಆದರೆ, ಭಾರತ ಸರ್ಕಾರದ ಮನವಿ ಹಾಗೂ ಧಾರ್ಮಿಕ ಮುಖಂಡರ ಮಧ್ಯಸ್ಥಿಕೆಯ ಬಳಿಕ ಆ ಗಲ್ಲು ಶಿಕ್ಷೆ ಮುಂದೂಡಲ್ಪಟ್ಟಿತ್ತು. ಭಾರತ ಸರ್ಕಾರ ಮತ್ತು ಗ್ರ್ಯಾಂಡ್ ಮುಫ್ತಿ ಅಬು ಬಕರ್ ಅಹ್ಮದ್ ಸೇರಿದಂತೆ ಹಲವಾರು ಧಾರ್ಮಿಕ ಮುಖಂಡರು ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ್ದರು. ಯೆಮನ್‌ನ ಹೌತಿ ಅಧಿಕಾರಿಗಳು ಈ ಹಿಂದೆ ಗಲ್ಲು ಶಿಕ್ಷೆಯನ್ನು ಅಮಾನತುಗೊಳಿಸಿದ್ದರು. ಈಗ ಅದನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ. ಇದರಿಂದಾಗಿ ನಿಮಿಷಾ ಅವರಿಗೆ ಮರುಜೀವ ಸಿಕ್ಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!