Sunday, December 3, 2023

Latest Posts

ವಯನಾಡಿನಲ್ಲಿ ಪೊಲೀಸ್-ನಕ್ಸಲರ ನಡುವೆ ಗುಂಡಿನ ಚಕಮಕಿ: ಇಬ್ಬರು ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ನಕ್ಸಲರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ತಳಪ್ಪುಳ ಪೊಲೀಸ್ ಠಾಣೆ ವ್ಯಾಪ್ತಿಯ ಪೆರಿಯಾ ಪ್ರದೇಶದಲ್ಲಿ ಕೇರಳ ಪೊಲೀಸರ ವಿಶೇಷ ತಂಡಗಳು ಮತ್ತು ನಕ್ಸಲರ ನಡುವೆ ಚಕಮಕಿ ನಡೆದಿದೆ.

ಲಭ್ಯವಾದ ರಹಸ್ಯ ಮಾಹಿತಿಯ ಮೇರೆಗೆ ನಿನ್ನೆ ರಾತ್ರಿ ಚಪ್ಪರ ಕಾಲೊನಿಗೆ ಬಂದ ಐವರಿದ್ದ ನಕ್ಸಲರ ತಂಡವನ್ನು ಪೊಲೀಸರು ಸುತ್ತುವರೆದಿದ್ದಾರೆ. ಕಾರ್ಯಾಚರಣೆಯ ವೇಳೆ ಪೊಲೀಸ್‌ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಮೂವರು ನಕ್ಸಲರು ತಪ್ಪಿಸಿಕೊಂಡಿದ್ದು, ಓರ್ವ ಪುರುಷ ಮತ್ತು ಮಹಿಳೆಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ವಶಕ್ಕೆ ಪಡೆದಿರುವ ಆರೋಪಿಗಳನ್ನು ವಿಚಾರಣೆಗಾಗಿ ಸಮೀಪದ ಪೊಲೀಸ್ ಶಿಬಿರಕ್ಕೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!