ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲವಾರು ರಾಜಕೀಯ ಪಕ್ಷಗಳ ಮನವಿಯನ್ನು ಪರಿಗಣಿಸಿದ ನಂತರ ಭಾರತದ ಚುನಾವಣಾ ಆಯೋಗವು ಕೇರಳ, ಪಂಜಾಬ್ ಮತ್ತು ಉತ್ತರ ಪ್ರದೇಶದ 14 ಕ್ಷೇತ್ರಗಳಲ್ಲಿ ಉಪಚುನಾವಣೆಯ ದಿನಾಂಕಗಳನ್ನು ಬದಲಾಯಿಸಿದೆ.
ಈ ಹಿಂದೆ ನವೆಂಬರ್ 13 ರಂದು ಚುನಾವಣೆಯನ್ನು ಘೋಷಿಸಲಾಗಿತ್ತು. ಇದೀಗ ಚುನಾವಣೆಯನ್ನು ನವೆಂಬರ್ 20ಕ್ಕೆ ಮುಂದೂಡಲಾಗಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದೆ.
ಕಲ್ಪಾಠಿ ರಥೋತ್ಸವ, ಕಾರ್ತಿಕ ಪೂರ್ಣಿಮಾ ಮತ್ತು ಶ್ರೀ ಗುರುನಾನಕ್ ದೇವ್ ಅವರ ಪ್ರಕಾಶ್ ಪರ್ವ ದಂತಹ ಹಬ್ಬಗಳನ್ನು ಉಲ್ಲೇಖಿಸಿ ರಾಜಕೀಯ ಪಕ್ಷಗಳು ಮತದಾನದ ದಿನಾಂಕವನ್ನು ಬದಲಾಯಿಸಲು ಮನವಿ ಮಾಡಿದ್ದವು. ಇದರಿಂದಾಗಿ ದಿನಾಂಕ ಬದಲಾವಣೆ ಮಾಡಲಾಗಿದೆ ಎಂದು ಚುನಾವಣಾ ಸಮಿತಿಯ ಮೂಲಗಳು ತಿಳಿಸಿವೆ.