spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಭಾರೀ ಮಳೆಗೆ ತತ್ತರಿಸಿದ ಕೇರಳ: 18 ಮಂದಿ ಸಾವು, ಹಲವರು ನಾಪತ್ತೆ

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇರಳದಲ್ಲಿ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ, ಸುರಿಯುತ್ತಿರುವ ಭಾರೀ ಮಳೆಗೆ ಹಲವೆಡೆ ಭೂಕುಸಿತ ಸಂಭವಿಸಿದೆ. ಇದರಿಂದ 18 ಮಂದಿ ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪಟ್ಟಣಂತಿಟ್ಟ, ಕೋಟಯಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಪ್ರವಾಹ ಹಾಗೂ ಸರಣಿ ಭೂಕುಸಿತಗಳು ನಾಗರಿಕರನ್ನು ತತ್ತರಿಸುವಂತೆ ಮಾಡಿದೆ.
ಭಾರೀ ಮಳೆಗೆ ಈಗಾಗಕೇ ರಾಜ್ಯದ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಅಲಪ್ಪುಳ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತುರ್ತು ಪರಿಸ್ಥಿತಿಯಲ್ಲಿರುವ ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಹೆಚ್ಚಿನ ಸಹಾಯಕ್ಕೆ ಸೇನೆ, ವಾಯುಪಡೆ ಮತ್ತು ನೌಕಾದಳದ ನೆರವು ಕೋರಲಾಗಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss