ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೇರಳದಲ್ಲಿ ದಿನದಿಂದ ದಿನಕ್ಕೆ ಝಿಕಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಮತ್ತೆ ಹೊಸದಾಗಿ ಎರಡು ಪ್ರಕರಣ ಪತ್ತೆಯಾಗುವ ಮೂಲಕ ಝಿಕಾ ಸೋಂಕಿತರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ತಿ ತಿಳಿಸಿದ್ದಾರೆ.
ತಿರುವನಂತಪುರಂ ಜಿಲ್ಲೆಯಲ್ಲಿ ಕಳಕೊಟ್ಟಂ ನಲ್ಲಿ 27 ವರ್ಷದ ಮಹಿಳೆಗೆ ಮತ್ತು 37 ವರ್ಷದ ವ್ಯಕ್ತಿಗೆ ಝಿಕಾ ವೈರಸ್ ದೃಢಪಟ್ಟಿದೆ
ಒಟ್ಟು 48 ಝಿಕಾ ಪ್ರಕರಣಗಳ ಪೈಕಿ ಈಗಾಗಲೇ 44 ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ ನಾಲ್ವರು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ.
ಝಿಕಾ ವೈರಸ್ ಮಟ್ಟ ಹಾಕಲು ಆರೋಗ್ಯ ಸಚಿವೆ ನೇತೃತ್ವದಲ್ಲಿ ಈಗಾಗಲೇ ಸಭೆ ನಡೆದಿದ್ದು, ವೈದ್ಯಕೀಯ ಮೂಲಸೌಕರ್ಯಗಳ ಹೆಚ್ಚಳ ಮತ್ತು ಸೊಳ್ಳೆಗಳ ನಿರ್ಮೂಲನೆಗೆ ಆದ್ಯತೆ ನೀಡಲಾಗಿದೆ.