30 ವರ್ಷಗಳಿಂದ 60ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಮಾಜಿ ಶಿಕ್ಷಕನ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 30 ವರ್ಷಗಳಲ್ಲಿ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಶಾಲಾ ಶಿಕ್ಷಕನನ್ನು ಬಂಧಿಸಲಾಗಿದ್ದು, ಈ ಘಟನೆಯ ಕುರಿತು ಹೆಚ್ಚಿನ ತನಿಖೆಗೆ ಆದೇಶಿಸಲಾಗಿದೆ. ಮಲಪ್ಪುರಂನ ಸೇಂಟ್ ಜೆಮ್ಮಾಸ್ ಗರ್ಲ್ಸ್ ಹೈಯರ್ ಸೆಕೆಂಡರಿ ಶಾಲೆಯ ಮಾಜಿ ಶಿಕ್ಷಕ ಹಾಗೂ ಮಲಪ್ಪುರಂ ಪುರಸಭೆಯ ಕೌನ್ಸಿಲ್ ಸದಸ್ಯ ಕೆ.ವಿ.ಶಶಿಕುಮಾರ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಕೇರಳದ ಶಿಕ್ಷಣ ಸಚಿವ ವಿ.ಶಿವನ್‌ಕುಟ್ಟಿ ಈ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಶಾಲಾ ಆಡಳಿತ ಮಂಡಳಿಯ ಲೋಪದೋಷಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ನಿರ್ದೇಶಕ ಬಾಬು ಕೆ. ಐಎಎಸ್ ಅವರಿಗೆ ಆದೇಶಿಸಿದರು. ಮಲಪ್ಪುರಂ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾದ ಬಳಿಕ ಶಶಿಕುಮಾರ್ ತಲೆಮರೆಸಿಕೊಂಡಿದ್ದ. ಒಂದು ವಾರದ ಬಳಿಕ ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಯಿತು.

ಶಾಲೆಯಲ್ಲಿ ಶಿಕ್ಷಕರಾಗಿದ್ದಾಗ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಶಶಿಕುಮಾರ್ ವಿರುದ್ಧ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ದೂರು ದಾಖಲಿಸಿದ್ದಾರೆ. ಕೆಲವು ವಿದ್ಯಾರ್ಥಿಗಳು 2019 ರಲ್ಲಿ ಶಶಿಕುಮಾರ್ ವಿರುದ್ಧ ದೂರು ನೀಡಿದ್ದರು. ಆದರೆ ಶಾಲಾ ಆಡಳಿತ ಮಂಡಲೀ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಹಳೆಯ ವಿದ್ಯಾರ್ಥಿಗಳೆಲ್ಲ ಸೇರಿ ಮಲಪ್ಪುರಂ ಜಿಲ್ಲಾ ಪೊಲೀಸ್ ಮುಖ್ಯಸ್ಥರನ್ನು ಸಂಪರ್ಕಿಸಿ ದೂರು ನೀಡಿದರು. ವಿದ್ಯಾರ್ಥಿಗಳ ದೂರಿನ ಆಧಾರದ ಮೇರೆಗೆ ಅವರನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!