Friday, March 31, 2023

Latest Posts

ಕೇರಳದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಮೇಲೆ ಭೀಕರ ಹಲ್ಲೆ !

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಇಬ್ಬರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ಸೇರಿದಂತೆ ಮೂವರ ಮೇಲೆ ಆಯುಧಗಳಿಂದ ಭೀಕರವಾಗಿ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ಆಲತ್ತೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಇಬ್ಬರು ಬಿಜೆಪಿ ಕಾರ್ಯಕರ್ತರಾದ ವಿಷ್ಣು ಮತ್ತು ದಿನೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ದಾಳಿಕೋರರನ್ನು ತಡೆಯಲು ಮುಂದಾದಾಗ ವಿಷ್ಣು ತಾಯಿ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಲತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!