ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಕೇರಳದ ಮಹಿಳೆಯೊಬ್ಬರು ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
ಕೇರಳದ ಕೊಲ್ಲಂ ಮೂಲದ ಅತುಲ್ಯ ಶೇಖರ್ (29) ಮೃತ ಮಹಿಳೆ. 2014ರಲ್ಲಿ ಅತುಲ್ಯ ಕೊಲ್ಲಂ ನಿವಾಸಿ ಶೇಖರ್ ಎಂಬವರನ್ನು ಮದುವೆಯಾಗಿ ಶಾರ್ಜಾದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನೆಲೆಸಿದ್ದರು. ಮದುವೆ ವೇಳೆ ಸತೀಶ್‌ಗೆ 320 ಗ್ರಾಂ ಚಿನ್ನ ಹಾಗೂ ಒಂದು ಬೈಕ್ ಅನ್ನು ವರದಕ್ಷಿಣೆ (Dowry) ರೂಪದಲ್ಲಿ ನೀಡಲಾಗಿತ್ತು. ಆದರೆ ಮದುವೆಯಾದಾಗಿನಿಂದ ಪತಿ ಅತುಲ್ಯಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಜುಲೈ 18 ಮತ್ತು ಜುಲೈ 19ರ ನಡುವೆ ಸತೀಶ್ ಅತುಲ್ಯಳನ್ನು ಉಸಿರುಗಟ್ಟಿಸಿ, ಹೊಟ್ಟೆಗೆ ಒದ್ದು, ತಲೆಗೆ ತಟ್ಟೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆಕೆಯ ತಾಯಿ ಆರೋಪಿಸಿದ್ದಾರೆ. ಘಟನೆ ಸಂಬಂಧ ಪತಿ ಸತೀಶ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.