ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುವತಿಯ ವೀಲ್ಸ್ ಹುಚ್ಚಿಗೆ ಸಾವನ್ನಪ್ಪಿದ್ದ ಕೇರಳ ಮೂಲದ ದೀಪಕ್ ಪ್ರಕರಣ ಸಂಬಂಧ, ಮಾನವೀಯತೆಯನ್ನು ಮರೆತು ವರ್ತಿಸಿದ ಆರೋಪಿ ಶಿಮ್ಮಿತಾ ಮುಸ್ತಫಾ ವಿರುದ್ಧ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಪ್ರಸ್ತುತ ನ್ಯಾಯಾಂಗದ ಬಂಧನದಲ್ಲಿರುವ ಆರೋಪಿ ಶಿಮ್ಮಿತಾ ಜಾಮೀನು ಅರ್ಜಿಯನ್ನು ಕುಂದಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ತಿರಸ್ಕರಿಸಿದ್ದು, ಹೀಗಾಗಿ ಕಾನೂನು ಹೋರಾಟ ಆಕೆಯ ಪಾಲಿಗೆ ಇನ್ನಷ್ಟು ಕಗ್ಗಂಟಾಗಿ ಪರಣಮಿಸಿದೆ.
ಈ ಪರಿಸ್ಥಿತಿಯಲ್ಲಿ ಜಾಮೀನು ನೀಡುವುದು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು’ ಎಂದು ಪ್ರಾಸಿಕ್ಯೂಷನ್ ವಾದಿಸಿದೆ. ಬಸ್ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರ ಹೇಳಿಕೆಗಳನ್ನು ದಾಖಲಿಸಬೇಕಾಗಿರುವು ಕಾರಣಕ್ಕೆ ಆರೋಪಿಯನ್ನು ಬಿಡುಗಡೆ ಮಾಡುವುದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪೊಲೀಸ್ ವರದಿಯಲ್ಲಿ ಸೂಚಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಆಕೆಗೆ ಈಗ ಜಾಮೀನು ತಿರಸ್ಕರಿಸಿದೆ.
ಏನಿದು ಪ್ರಕರಣ?
ಇತ್ತೀಚೆಗೆ, ಆರೋಪಿ ಶಿಮ್ಮಿತಾ, ತನಗೆ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ಅಸಭ್ಯಕರವಾಗಿ ಮುಟ್ಟುತ್ತಿದ್ದಾನೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ, ಸುಳ್ಳು ಸಂದೇಶವನ್ನು ಹರಿಯಬಿಟ್ಟಿದ್ದಳು. ಈ ವಿಡಿಯೋ ಕ್ಷಣಮಾತ್ರದಲ್ಲಿ ವೈರಲ್ ಆಗಿತ್ತು. ತನ್ನದೇನು ತಪ್ಪಿಲ್ಲದಿದ್ದರೂ ಸುಖಾಸುಮ್ಮನೆ ನನ್ನನ್ನು ವಿಡಿಯೋದಲ್ಲಿ ತೋರಿಸಿ, ಮಾನ-ಮರ್ಯಾದೆ ಕಳೆದಳು ಎಂದು ಭಾವಿಸಿದ ದೀಪಕ್, ಮನನೊಂದು ಆತ್ಮಹತ್ಯೆಗೆ ಶರಣಾದರು. ಈ ಘಟನೆ ಇಡೀ ದೇಶದಲ್ಲಿ ಭಾರೀ ಚರ್ಚೆಗೆ ಗ್ರಾಸವಾಯಿತು.



