Tuesday, June 28, 2022

Latest Posts

ಅಫ್ಘಾನ್ ನಿಂದ ಭಾರತಕ್ಕೆ ಬಂದ ಕೇರಳಿಗರು: ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ ಕೇರಳ ಸಿಎಂ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಫ್ಘಾನಿಸ್ತಾನದಿಂದ ಕೇರಳಿಗರು ಒಳಗೊಂಡಂತೆ ಭಾರತೀಯರನ್ನು ಸ್ವದೇಶಕ್ಕೆ ಕರೆಸಿಕೊಂಡಿರುವುದು ಶ್ಲಾಘನೀಯ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭಾನುವಾರ ಹೇಳಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿರುವ ವಿಜಯನ್, ನೆರವಿನ ಅಗತ್ಯವಿರುವ ಕೇರಳಿಗರು Norka roots ಸಂಪರ್ಕಿಸಬಹುದೆಂದು ಅವರು ಹೇಳಿದ್ದಾರೆ.
ಭಾನುವಾರ ಇಬ್ಬರು ಆಫ್ಘನ್ ಶಾಸಕರು ಸೇರಿದಂತೆ ಸುಮಾರು 400 ಜನರನ್ನು ಕಾಬೂಲ್ ನಿಂದ ಭಾರತಕ್ಕೆ ಕರೆತರಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss