October 16, 2026
Friday, October 16, 2026
spot_img

ಕೇತಗಾನಹಳ್ಳಿ ಭೂ ವಿವಾದ: ಕುಮಾರಸ್ವಾಮಿಗೆ ಸುಪ್ರೀಂ ಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇತಗಾನಹಳ್ಳಿಯ ಅಕ್ರಮ ಭೂ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣದ ತುರ್ತು ವಿಚಾರಣೆ ನಡೆಸಬೇಕೆಂದು ಕೋರಿ ‘ಸಮಾಜ ಪರಿವರ್ತನಾ ಸಮುದಾಯ’ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಈ ಅರ್ಜಿಯ ಪರವಾಗಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿ, ಸರ್ವೇ ಕಾರ್ಯಗಳ ನಂತರದ ಬೆಳವಣಿಗೆಯ ಆಧಾರದ ಮೇಲೆ ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಮನವಿ ಮಾಡಿದ್ದರು.

ಆದರೆ, ಕುಮಾರಸ್ವಾಮಿ ಪರ ವಕೀಲರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಇದರಲ್ಲಿ ಅಂತಹ ತುರ್ತು ಏನೂ ಇಲ್ಲ ಎಂದು ವಾದಿಸಿದರು. ಉಭಯ ಪಕ್ಷಗಳ ವಾದ ಆಲಿಸಿದ ಸುಪ್ರೀಂ ಕೋರ್ಟ್, ಈ ಪ್ರಕರಣವನ್ನು ಸಾಮಾನ್ಯ ವಿಚಾರಣಾ ಪಟ್ಟಿಯಲ್ಲೇ ಪರಿಗಣಿಸಲಾಗುವುದು ಎಂದು ಸ್ಪಷ್ಟಪಡಿಸಿ, ತುರ್ತು ವಿಚಾರಣೆಯ ಬೇಡಿಕೆಯನ್ನು ತಳ್ಳಿಹಾಕಿದೆ.

Must Read