ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಬಿಡದಿಯ ಕೇತಗಾನಹಳ್ಳಿ ಬಳಿಯ ಸರ್ವೆ ನಂಬರ್ 7,8,9 ರ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು, ರಾಜ್ಯ ಸರ್ಕಾರ ಕೂಡ ತನಿಖೆಗೆ ಎಸ್‌ಐಟಿ ರಚನೆ ಮಾಡಿತ್ತು. ಆದರೆ ಎಸ್‌ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಕುಮಾರಸ್ವಾಮಿ ಪರ ವಕೀಲರು ಸರ್ಕಾರ ಎಸ್‌ಐಟಿ ರಚನೆ ಮಾಡುವ ಸಂದರ್ಭದಲ್ಲಿ ಔಪಚಾರಿಕವಾಗಿ ಯಾವುದೇ ತೆರನಾದ ಅಧಿಸೂಚನೆಯನ್ನು ಪ್ರಕಟಿಸಿಲ್ಲ ಎಂದು ಮಂಡಿಸಿದ್ದರು.
ವಾದವನ್ನು ಆಲಿಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ. ಜೊತೆಗೆ ರಾಮನಗರ ಜಿಲ್ಲಾಧಿಕಾರಿ ಮತ್ತು ತಹಸಿಲ್ದಾರ್‌ಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ.