JOB| ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಅರಣ್ಯ ವೀಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಜೊತೆಗೆ ಆಗಸ್ಟ್‌ 31,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಕ್ಟೋಬರ್‌ 26,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!